ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಈ ಅಪಘಾತ ನಡೆದಿದೆ. ವೇಗವಾಗಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಟ್ಟೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗಿನ ಜಾವ 5 ಗಂಟೆಗೆ ಈ ಅಪಘಾತ ಸಂಭವಿಸಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಿವರಗಳು ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

