ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ.
ಆಂಧ್ರ ಮೂಲದ ಇನೋವಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TAGGED:ಭೀಕರ ಅಪಘಾತ