ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಸಜೀವ ದಹನಗೊಂಡು ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಓರ್ವ ಸಜೀವ ದಹನಗೊಂಡು ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.
ಅಗ್ನಿ ಅವಘಡದಿಂದ ಭಾರಿ ಪ್ರಮಾಣದ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 3:30 ರ ವೇಳೆಗೆ ಈ ಅವಘಡ ಸಂಭವಿಸಿದೆ.
You Might Also Like
TAGGED:ಅಗ್ನಿ ಅವಘಡ