ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆಗೆ ಸಿದ್ಧತೆ : ಶೀಘ್ರವೇ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ’ ಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಹೃದಯಸಂಬಂಧಿ ಉಚಿತ ಚಿಕಿತ್ಸೆಯ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲು ಮುಂದಾಗಿದೆ.

ಹೌದು, ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಯೋಮಾನದವರಿಗೆ ಹೃದಯಕ್ಕೆ ಸಂಬಂಧಿಸಿದ ಉಚಿತ ಚಿಕಿತ್ಸೆಯನ್ನು ಶೀಘ್ರದಲ್ಲೇ ನೀಡಲು ರಾಜ್ಯದ 16 ಜಿಲ್ಲೆಗಳಲ್ಲಿರುವ ಶೇ. 85 ರಷ್ಟು ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿಯ 50 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಈ ಯೋಜನೆಗೆ ಜೋಡಿಸುವ ಕೆಲಸವಾಗುತ್ತಿದ್ದು, ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಆರೋಗ್ಯ ಇಲಾಕೆಯ ಮೂಲಕ ಯೋಜನೆ ರೂಪಿಸಿದ್ದು, ಇದಕ್ಕೆ ಚಿತ್ರನಟ ದಿ.ಪುನೀತ್ ರಾಜ್ ಕುಮಾರ್ ಅವರ ನೆನಪಿನಲ್ಲಿ `ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ’ ಎನ್ನುವ ಹೆಸರಿಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read