HomeKarnatakaBIG NEWS: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

BIG NEWS: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಹಾಸನ: ವರುಣಾರ್ಭಟದ ನಡುವೆಯೇ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗುವ ಸ್ಥಿತಿ ನಿರ್ಮಾಣವಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿಘಾಟ್ ನಲ್ಲಿ ಭೂಕುಸಿತವಾಗಿದ್ದು, ರಸ್ತೆ ಬಿರುಕು ಬಿಟ್ಟಿದೆ. ತಡೆಗೋಡೆಗಳ ಮೇಲೆ ಮಣ್ಣು ಕುಸಿಯುತ್ತಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿವೆ.

ಎರಡು ದಿನಗಳಿಂದ ಈ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಅವ್ಯವಸ್ಥೆಯುಂಟಾಗಿದೆ. ಒಂದೆಡೆ ಭೂಕುಸಿತ, ಇನ್ನೊಂದೆಡೆ ಧರೆಗುರುಳಿದ ವಿದ್ಯುತ್ ಕಂಬಗಳು… ಎನ್ ಹೆಚ್ ಎಐ ಅಧಿಕಾರಿಗಳ ಬೇಜವಾಬ್ದಾರಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular