HomeIPL 2026ಐಪಿಎಲ್ ಪಂದ್ಯ ವೇಳೆ ಜನಸಂದಣಿ ನಿಯಂತ್ರಣಕ್ಕೆ ಮತ್ತೊಂದು ಕ್ರಮ: ಚಿನ್ನಸ್ವಾಮಿ ಸ್ಟೇಡಿಯಂನಿಂದ ವಿವಿಧೆಡೆಗೆ ವಿಶೇಷ ಬಸ್...

ಐಪಿಎಲ್ ಪಂದ್ಯ ವೇಳೆ ಜನಸಂದಣಿ ನಿಯಂತ್ರಣಕ್ಕೆ ಮತ್ತೊಂದು ಕ್ರಮ: ಚಿನ್ನಸ್ವಾಮಿ ಸ್ಟೇಡಿಯಂನಿಂದ ವಿವಿಧೆಡೆಗೆ ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 5 ರಂದು ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ.

ಐಪಿಎಲ್ ಪಂದ್ಯ ವೀಕ್ಷಿಸಲು ಬರುವವರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ನಿಂದ ಮೆಟ್ರೋ ರೈಲುಗಳ ಸಮಯ ವಿಸ್ತರಿಸಲಾಗಿದೆ. ಜನಸಂದಣಿ ನಿಯಂತ್ರಿಸುವ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧೆಡೆಗೆ ಬಿಎಂಟಿಸಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಿಂದ ಕಾಡುಗೋಡಿ ಬಸ್ ನಿಲ್ದಾಣ, ಹೆಚ್ಎಎಲ್ ರಸ್ತೆ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಜನಪ್ರಿಯ ಟೌನ್ ಶಿಪ್, ಮಾಗಡಿ ರಸ್ತೆ, ಆರ್.ಕೆ. ಹೆಗಡೆ ನಗರ, ಯಲಹಂಕ, ಹೊಸಕೋಟೆ, ಬನಶಂಕರಿಗೆ ವಿಶೇಷ ಬಿಎಂಟಿಸಿ ಬಸ ಗಳು ಸಂಚರಿಸಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಶೇಷ ಬಸ್ಗಳು ಸಿಟಿಓ ಜಂಕ್ಷನ್ ನಿಂದ ಬಿ.ಆರ್.ವಿ. ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ನಿಲುಗಡೆಯಾಗಲಿವೆ. ಸಾರ್ವಜನಿಕರು ವಿಶೇಷ ಬಸ್ ವ್ಯವಸ್ಥೆ ಸದುಪಯೋಗ ಪಡೆದುಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಸುರಕ್ಷತೆಯ ದೃಷ್ಟಿಯಿಂದ ಕ್ರೀಡಾಂಗಣಕ್ಕೆ ಕೆಲವು ವಸ್ತುಗಳ ತರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular