ಹಾರುತ್ತಿದ್ದ ವಿಮಾನದಲ್ಲೇ ಮತ್ತೊಂದು ಶಾಕಿಂಗ್‌ ಘಟನೆ; ಕುಡಿದ ಅಮಲಿನಲ್ಲಿ ಹೊದಿಕೆ ಮೇಲೆ ಮೂತ್ರ ವಿಸರ್ಜನೆ

ನವೆಂಬರ್ 26 ರಂದು ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ವ್ಯಕ್ತಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆಯ ನಂತರ ಇದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಪ್ಯಾರಿಸ್ – ದೆಹಲಿ ಮಾರ್ಗದಲ್ಲಿ ಕುಡಿದ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರ ಹೊದಿಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮತ್ತೊಂದು ಪ್ರಕರಣ ವರದಿಯಾಗಿದೆ. ಆದರೆ ಪ್ರಯಾಣಿಕ ಲಿಖಿತವಾಗಿ ಕ್ಷಮೆ ಯಾಚಿಸಿದ ನಂತರ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಡಿಸೆಂಬರ್ 6 ರಂದು ಏರ್ ಇಂಡಿಯಾ ಫ್ಲೈಟ್ 142 ನಲ್ಲಿ ಸಂಭವಿಸಿದೆ ಮತ್ತು ವಿಮಾನದ ಪೈಲಟ್ ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ಈ ವಿಷಯವನ್ನು ವರದಿ ಮಾಡಿದದ್ದು, ಅದರ ನಂತರ ಪುರುಷ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿತ್ತು.

ವಿಮಾನವು ದೆಹಲಿಯಲ್ಲಿ ಬೆಳಿಗ್ಗೆ 9:40 ರ ಸುಮಾರಿಗೆ ಇಳಿದಾಗ ಪುರುಷ ಪ್ರಯಾಣಿಕನು ಕುಡಿತದ ಅಮಲಿನಲ್ಲಿದ್ದ ಮತ್ತು ಅವನು ಕ್ಯಾಬಿನ್ ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸಲಿಲ್ಲ. ಅವನು ವಿಮಾನದಲ್ಲಿದ್ದ ಮಹಿಳೆಯ ಹೊದಿಕೆಯ ಮೇಲೆ ಮೂತ್ರ ವಿಸರ್ಜಿಸಿದ್ದ ಎಂದು ವಿಮಾನ ನಿಲ್ದಾಣದ ಭದ್ರತೆಗೆ ತಿಳಿಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕನನ್ನು ವಿಮಾನದಿಂದ ಕೆಳಗಿಳಿದ ಕೂಡಲೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಆತನನ್ನು ವಶಕ್ಕೆ ಪಡೆದಿದ್ದು, ಆದರೆ ಇಬ್ಬರೂ ಪ್ರಯಾಣಿಕರು ಪರಸ್ಪರ ರಾಜಿ ಮಾಡಿಕೊಂಡ ನಂತರ ಮತ್ತು ಆರೋಪಿ ಲಿಖಿತ ಕ್ಷಮೆಯಾಚನೆಯನ್ನು ಸಲ್ಲಿಸಿದ ನಂತರ ಅವರನ್ನು ಬಿಡಲು ಅನುಮತಿಸಲಾಯಿತು ಎಂದು ಅವರು ಹೇಳಿದರು.

ನವೆಂಬರ್ 26 ರ ಪ್ರಕರಣದ ನಂತರ ಕೇವಲ ಒಂದು ವಾರದ ನಂತರ ಈ ಘಟನೆ ಸಂಭವಿಸಿದೆ. ಅಲ್ಲಿ ಕುಡಿದ ಮತ್ತಲ್ಲಿದ್ದ ವ್ಯಕ್ತಿ ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಸಂತ್ರಸ್ತೆ ಏರ್ ಇಂಡಿಯಾಗೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read