ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ರಾಮಗೊಂಡನಹಳ್ಳಿಯ ಶಾಲಾ ಕಟ್ಟಡದ ಬಳಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಜಿತೇಂದ್ರ ಪಾಂಡೆ ಎಂಬಾತನನ್ನು ಸೀತಾರಾಮ್ ಎಂಬಾತ ಹತ್ಯೆಗೈದಿದ್ದಾನೆ.
ಕುಡಿದ ಮತ್ತಿನಲ್ಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜುಲೈ 28 ರಂದು ನಡೆದ ಘಟನೆ ಜುಲೈ 29 ರಂದು ಬೆಳಕಿಗೆ ಬಂದಿದೆ. ವರ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
You Might Also Like
TAGGED:ಮರ್ಡರ್