HomeLatest NewsBREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಯುವಕನಿಂದ 'BBM' ವಿದ್ಯಾರ್ಥಿನಿಯ ಬರ್ಬರ ಹತ್ಯೆ.!

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಯುವಕನಿಂದ ‘BBM’ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!

ಬೆಂಗಳೂರು : ಬಿಬಿಎಂ ವಿದ್ಯಾರ್ಥಿನಿಯೋರ್ವಳನ್ನು ಯುವಕ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾದನಾಯನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ವಿದ್ಯಾರ್ಥಿನಿಯನ್ನ ದೇವಿಶ್ರೀ (21) ಎಂದು ಗುರುತಿಸಲಾಗಿದೆ. ದೇವಿಶ್ರೀ ಬೆಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ನಿನ್ನೆ ಬೆಳಗ್ಗೆ ಈಕೆ ಆರೋಪಿ ಪ್ರೇಮವರ್ಧನ್ ಜೊತೆ ತೆರಳಿದ್ದಾಳೆ. ದೇವಿಶ್ರೀಯನ್ನ ಸ್ನೇಹಿತೆಯ ರೂಮ್  ಗೆ ಕರೆದುಕೊಂಡು ಹೋಗಿ ಕೊಂದಿದ್ದಾನೆ ಎನ್ನಲಾಗಿದೆ.

ಸ್ನೇಹಿತೆಯ ರೂಮ್ ಗೆ ಕರೆದುಕೊಂಡ ಹೋದ ಯುವಕ ಪ್ರೇಮವರ್ಧನ್ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ . ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂಧ್ರ ಮೂಲದ ದೇವಿಶ್ರೀ ಬೆಂಗಳೂರಲ್ಲಿ ಓದುತ್ತಿದ್ದಳು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular