ಚಿಕ್ಕೋಡಿ : ರಾಜ್ಯದಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಕ್ಕೇರಿ ಗ್ರಾಮದ ಶಹಾಬಂದರ ಗ್ರಾಮದಲ್ಲಿ ಈ ಕೊಲೆ ನಡೆದಿದೆ.
ಕೊಲೆಯಾದ ಯುವಕನನ್ನು ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಎಂದು ಗುರುತಿಸಲಾಗಿದೆ. ಯುವಕ ಕೆಲಸ ಮುಗಿಸಿ ತನ್ನ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಯಮಕನಮರಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಮರ್ಡರ್