ಬೆಂಗಳೂರು : ಶಕ್ತಿ ಯೋಜನೆ ಮತ್ತೊಂದು ದಾಖಲೆ ಬರೆದಿದ್ದು, ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರ್ಪಡೆಯಾಗಿದೆ.
ಈಗಾಗಲೇ ಶಕ್ತಿ ಯೋಜನೆ Golden Book of World Records ನಲ್ಲಿ ಸೇರ್ಪಡೆಯಾಗಿತ್ತು. ಇದರೊಂದಿಗೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆ ಮೂಲಕ ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ/ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ/ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಿದೆ. ಕರ್ನಾಟಕ ರಾಜ್ಯದ ಮಹಿಳೆಯರಿಗೆ ವಿದ್ಯಾರ್ಥಿನಿಯರು ಸೇರಿದಂತೆ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಅನ್ವಯಿಸುತ್ತದೆ,