HomeKarnatakaBREAKING : ರಾಜ್ಯದಲ್ಲಿ ಮತ್ತೊಂದು ದರೋಡೆ ; ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ...

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ ; ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ‘ಟಿ ಬೇಗೂರು’ ಸಮೀಪ  ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ.

ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.ಆರೋಪಿಗಳು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಪ್ರವೇಶಿಸಿದ್ದಾರೆ. ಒಳಗೆ ಹೋದ ನಂತರ ಮಾರಕಾಸ್ತ್ರಗಳನ್ನು (ಕೆಲವು ವರದಿಗಳ ಪ್ರಕಾರ ಬಂದೂಕಿನಂತಹ ಆಯುಧ) ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ.

ಅಂಗಡಿಯಲ್ಲಿದ್ದ ಸುಮಾರು 30-35 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ದರೋಡೆಕೋರರು ಉಂಗುರಗಳಿದ್ದ ಟ್ರೇ ಅನ್ನು ದೋಚಿರುವುದಾಗಿ ತಿಳಿದುಬಂದಿದೆ.ಘಟನೆಯ ನಂತರ ದುಷ್ಕರ್ಮಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಘಟನೆಯು ಆ ಭಾಗದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular