HomeLatest NewsSHOCKING : ರಾಜ್ಯದಲ್ಲಿ ಮತ್ತೊಂದು 'ಪೈಶಾಚಿಕ ಕೃತ್ಯ' :  ಬೆಳಗಾವಿಯಲ್ಲಿ 15 ವರ್ಷದ ಬಾಲಕಿ...

SHOCKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ :  ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್.!

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಈ ಘಟನೆ ನಡೆದಿದೆ. ಸಾಕೀಬ್ ಎಂಬ ಆರೋಪಿ ಸೇರಿ ಇಬ್ಬರು ಅಪ್ತಾಪ್ತರು ಸೇರಿ ಮೂವರು ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ ಎನ್ನಲಾಗಿದೆ.

ಕಳೆದ ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಸ್ನೇಹಿತ ಆಕೆಯನ್ನು ರೆಸಾರ್ಟ್ ಗೆ ಕರೆತಂದಿದ್ದ, ನಂತರ ಸಾಕೀಬ್ , ಇಬ್ಬರು ಅಪ್ರಾಪ್ತರು ಸೇರಿ ಮೂವರು ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿಯ ಸ್ನೇಹಿತ ಹೇಗೋ ಬಾಲಕಿಯನ್ನು ಪುಸಲಾಯಿಸಿ ರೆಸಾರ್ಟ್ ಗೆ ಕರೆ ತಂದಿದ್ದಾನೆ. ಸಾಕೀಬ್ ಮೊದಲೇ ರೆಸಾರ್ಟ್ ನಲ್ಲಿ ರೂಮ್ ಬುಕ್ ಮಾಡಿದ್ದ. ನಂತರ ಬಾಲಕಿಯನ್ನು ರೆಸಾರ್ಟ್ ಗೆ ಕರೆತಂದು ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸದ್ಯ,ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಾಂದರ್ಭಿಕ ಚಿತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular