ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಎಸಗಿದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಬಂಧಿತರನ್ನು ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದೆ.
ಕೆಲಸ ಹುಡುಕಿಕೊಂಡು ಬಂದು ನಂತರ ವಾಪಸ್ ಆಗುತ್ತಿದ್ದ ಯುವತಿಯಗೆ ಡ್ರಾಪ್ ಕೊಡುವ ನೆಪದಲ್ಲಿ ಸಿಕಂದರ್ ಬೈಕ್ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಅಲ್ಲಿಗೆ ಬಂದ ಸಿಕಂದರ್ ಸ್ನೇಹಿತ ಕೂಡ ಅತ್ಯಾಚಾರ ಎಸಗಿದ್ದಾನೆ. ನಂತರ ಮಹಿಳೆಯ ಚಿನ್ನದ ಓಲೆ ಕಸಿದುಕೊಂಡು ಕಾಮುಕರು ಎಸ್ಕೇಪ್ ಆಗಿದ್ದಾರೆ. ನಂತರ ಸ್ಥಳೀಯರು ಆತಂಕಕ್ಕೊಳಗಾಗಿದ್ದ ಯುವತಿಯನ್ನು ಗಮನಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.