ಮತ್ತೊಂದು ಅವಮಾನೀಯ ಕೃತ್ಯ : ದಲಿತ ಯುವಕರ ಮೇಲೆ ಮೂತ್ರ ವಿಸರ್ಜನೆ ಮಾಡಿ, ಮಾರಣಾಂತಿಕ ಹಲ್ಲೆ!

ತಿರುನೆಲ್ವೇಲಿ: ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರ ಮೇಲೆ ಮೂತ್ರ ವಿಸರ್ಜನೆ  ಮಾಡಿ, ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಸೋಮವಾರ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಸಂತ್ರಸ್ತರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಮಣಿಮೂರ್ತೀಶ್ವರಂನ ಮನೋಜ್ ಕುಮಾರ್ (21) ಮತ್ತು ಆತನ ಸ್ನೇಹಿತ ಮರಿಯಪ್ಪನ್ (19) ಸ್ನಾನ ಮಾಡಲು ತಾಮಿರಬರಣಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅವರು ಮನೆಗೆ ಹಿಂದಿರುಗುತ್ತಿದ್ದಾಗ, ನದಿಯ ಬಳಿ ಮದ್ಯ ಸೇವಿಸುತ್ತಿದ್ದ ಕೆಲವರು ಅವರನ್ನು ತಡೆದು ಅವರ ಜಾತಿಯ ಬಗ್ಗೆ ಕೇಳಿದರು ಎಂದು ಆರೋಪಿಸಲಾಗಿದೆ.

ತಾವು ದಲಿತ ಸಮುದಾಯಕ್ಕೆ ಸೇರಿದವರು ಎಂದು ತಿಳಿದಾಗ ಆರೋಪಿಗಳು ತಮ್ಮ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದರು ಎಂದು ಸಂತ್ರಸ್ತರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ನಂತರ ಅವರು ಯುವಕರನ್ನು ವಿವಸ್ತ್ರಗೊಳಿಸಿ ಅವರ ಮೇಲೆ ಮೂತ್ರ ವಿಸರ್ಜಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಂಗಳವಾರ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಯನ್ನು ತಾಜೈಯೂತು ನಿವಾಸಿ ಪೊನ್ನುಮಣಿ (25) ನಲ್ಲಮುತ್ತು (21), ಆಯಿರಂ (19), ರಾಮರ್ (22), ಶಿವ (22) ಮತ್ತು ಲಕ್ಷ್ಮಣನ್ (22) ಎಂದು ಗುರುತಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read