HomeKarnatakaನೀರು, ವಿದ್ಯುತ್ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್: ಶೀಘ್ರವೇ ಆಟೋ ಪ್ರಯಾಣ ದರ ಏರಿಕೆ...

ನೀರು, ವಿದ್ಯುತ್ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್: ಶೀಘ್ರವೇ ಆಟೋ ಪ್ರಯಾಣ ದರ ಏರಿಕೆ ಸಾಧ್ಯತೆ

ಬೆಂಗಳೂರು: ನೀರು, ವಿದ್ಯುತ್, ಮೆಟ್ರೋ ದರ ಏರಿಕೆ ಬೆನ್ನಲ್ಲೇ ರಾಜಧಾನಿ ಬೆಂಗಳೂರು ನಿವಾಸಿಗಳಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ.

ಆಟೋಗಳ ಕನಿಷ್ಠ ದರ ಸದ್ಯದಲ್ಲಿಯೇ ಹೆಚ್ಚಳವಾಗುವ ಸಾಧ್ಯತೆ ಇದೆ. ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈಗ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದು, ಒಂದು ವೇಳೆ ದರ ಪರಿಷ್ಕರಣೆ ಮಾಡಿದಲ್ಲಿ ಮಿನಿಮಮ್ ಚಾರ್ಜ್ 36 ರೂ. ಆಗಲಿದೆ. ಆನಂತರ ಪ್ರತಿ ಕಿಲೋಮಿಟರ್ ದರ 18 ರೂ.ನಷ್ಟು ಹೆಚ್ಚಳವಾಗಲಿದೆ. ಪ್ರಸ್ತುತ ಮಿನಿಮಮ್ ಚಾರ್ಜ್ 30 ರೂಪಾಯಿ ಇದ್ದು, ನಂತರದ ಪ್ರತಿ ಕಿಲೋ ಮೀಟರ್ ಗೆ 15 ರೂಪಾಯಿ ದರ ನಿಗದಿಪಡಿಸಲಾಗಿದೆ.

ಆಟೋ ಚಾಲಕರಿಂದ ಮೀಟರ್ ದರ ಹೆಚ್ಚಳಕ್ಕೆ ಒತ್ತಡವಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಪ್ರಯಾಣಿಕರು ದರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular