BREAKING : ಬಿಜೆಪಿಗೆ ಮತ್ತೊಂದು ಶಾಕ್ ; ಕಾಂಗ್ರೆಸ್ ಗೆ ಮರು ಸೇರ್ಪಡೆಗೊಂಡ ತೇಜಸ್ವಿನಿ ಗೌಡ

ಬೆಂಗಳೂರು: ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಇಂದು ಕಾಂಗ್ರೆಸ್ ಗೆ ಮರು ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಮೈಸೂರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಕೊಡದೇ ಇದ್ದರಿಂದ ಅವರು ಅಸಮಾಧಾನಗೊಂಡಿದ್ದರು. ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ 23 ಕ್ಷೇತ್ರ ಗೆಲ್ಲುವ ಅವಕಾಶ ಕಾಂಗ್ರೆಸ್ ಗೆ ಇದೆ. ನಾನು 9 ವರ್ಷ ಕಾಂಗ್ರೆಸ್ನಲ್ಲಿ ಇದ್ದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ವಿಧಾನಸೌಧದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾದ ತೇಜಸ್ವಿನಿ, ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯತ್ವದ ಅವಧಿ ಜೂನ್ ಅವರೆಗೂ ಇತ್ತು. ಆದರೆ ಅವರೇ ಖುದ್ದು ಬಂದು ರಾಜೀನಾಮೆ ನೀಡಿದ ಕಾರಣಕ್ಕೆ ರಾಜೀನಾಮೆ ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read