ಬೆಂಗಳೂರು : ತರಕಾರಿ, ಆಹಾರ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ 3 ರೂ ಹೆಚ್ಚಳವಾಗುವ ಸಾಧ್ಯತೆಯಿದೆ. ಹೌದು, ನೂತನ ದರ ಮುಂದಿನ ವಾರದಿಂದಲೇ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹಾಲಿನ ದರ ಹೆಚ್ಚಳ ಮಾಡುವ ಸಂಬಂಧ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಾತನಾಡಿದ್ದಾರೆ. ಖರೀದಿಸುವ ಹಾಲಿನ ದರವನ್ನು ಹೆಚ್ಚಳ ಮಾಡಲಾಗುವುದು ಎಂದಿದ್ದಾರೆ. ಕೆಎಂಎಫ್ ಹಾಗೂ ಅಧಿಕಾರಿಗಳ ಮನವಿಯಂತೆ ಹಾಲಿನ ಮೊತ್ತವನ್ನು 5 ರೂಪಾಯಿಗೆ ಹೆಚ್ಚಳ ಮಾಡಲು ಮನವಿ ಸಲ್ಲಿಸಲಾಗಿದೆ. ಆದರೆ 5 ರೂ ಬದಲು 3 ರೂ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಮುಂದಿನ ವಾರದಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಹೇಳಲಾಗಿದ್ದು, ಈಗಾಗಲೇ ಹಾಲಿನ ದರ ಏರಿಕೆ ವಿಚಾರವಾಗಿ ಕೆಎಂ ಎಫ್ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಶುಕ್ರವಾರ ಮತ್ತೆ ಕೆಎಂ ಎಫ್ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಅಂದು ಹಾಲಿನ ದರ ಏರಿಕೆ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ.