HomeKarnatakaರಾಜ್ಯದ ಜನತೆಗೆ ಮತ್ತೊಂದು ಶಾಕ್ : ಶೀಘ್ರವೇ 'ನಂದಿನಿ' ಹಾಲಿನ ದರ 5 ರೂ ಹೆಚ್ಚಳ...

ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಶೀಘ್ರವೇ ‘ನಂದಿನಿ’ ಹಾಲಿನ ದರ 5 ರೂ ಹೆಚ್ಚಳ ಸಾಧ್ಯತೆ

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲೇ ನಂದಿನಿ ( Nandini Milk) ಹಾಲಿನ ದರ ಲೀ.ಗೆ 5 ರೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಜುಲೈ 6 ರಂದು ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಈಗಾಗಲೇ ಹಾಲಿನ ದರ ಹೆಚ್ಚಳ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರವನ್ನು ಲೀಟರ್ಗೆ 5 ರೂ. ಹೆಚ್ಚಿಸುವಂತೆ ಹಿಂದೆಯೇ ಬೇಡಿಕೆ ಇಟ್ಟಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ” ಎಂದರು.ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್ ಮೇಲೆ ತೀವ್ರ ಒತ್ತಡವಿದ್ದು, ಈ ಹಿನ್ನೆಲೆ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular