ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ ಕೆ. ವೆಂಕಟೇಶ್

ಬೆಂಗಳೂರು : ತರಕಾರಿ, ಆಹಾರ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ 3 ರೂ ಹೆಚ್ಚಳವಾಗುವ ಸಾಧ್ಯತೆಯಿದೆ. ಹೌದು, ನೂತನ ದರ ಮುಂದಿನ ವಾರದಿಂದಲೇ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಬಗ್ಗೆ ಪಶುಸಂಗೋಪನಾ ಸಚಿವ ವೆಂಕಟೇಶ್ ಮಾಹಿತಿ ನೀಡಿದ್ದು, ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧವಾಗಿದೆ ಎಂದುಸಚಿವ ಕೆ ವೆಂಕಟೇಶ್ ಹೇಳಿದರು.ಈ ಬಗ್ಗೆ ಸದನದಲ್ಲಿ ಮಾತನಾಡಿದ ವೆಂಕಟೇಶ್, ಹಾಲಿನ ದರ ಹೆಚ್ಚಳದ ಪ್ರಸ್ತಾವನೆ ಸಿದ್ಧವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಅಂತಿಮ ಒಪ್ಪಿಗೆಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು. ಹಾಲಿನ ದರ ಏರಿಕೆಯ ಮಾಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿದ ನಂತರ ಅದನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ಕೆಎಂಎಫ್ ಹಾಗೂ ಅಧಿಕಾರಿಗಳ ಮನವಿಯಂತೆ ಹಾಲಿನ ಮೊತ್ತವನ್ನು 5 ರೂಪಾಯಿಗೆ ಹೆಚ್ಚಳ ಮಾಡಲು ಮನವಿ ಸಲ್ಲಿಸಲಾಗಿದೆ. ಆದರೆ 5 ರೂ ಬದಲು 3 ರೂ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.ಮುಂದಿನ ವಾರದಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಹೇಳಲಾಗಿದ್ದು, ಈಗಾಗಲೇ ಹಾಲಿನ ದರ ಏರಿಕೆ ವಿಚಾರವಾಗಿ ಕೆಎಂ ಎಫ್ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಶುಕ್ರವಾರ ಮತ್ತೆ ಕೆಎಂ ಎಫ್ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಅಂದು ಹಾಲಿನ ದರ ಏರಿಕೆ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read