HomeIndiaBIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ...!

BIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ…!

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಮತದಾನಕ್ಕೂ ಮುನ್ನ ಈಗಾಗಲೇ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದರೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆ ಬಳಿಕ ಆರು ಬಾರಿ ಶಾಸಕರಾಗಿದ್ದ ಮಧ್ಯಪ್ರದೇಶದ ರಾಮ್ ನಿವಾಸ್ ರಾವತ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಇದೀಗ ದೆಹಲಿಯ ಇಬ್ಬರು ಕಾಂಗ್ರೆಸ್ ಶಾಸಕರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಮತ್ತೊಂದು ಶಾಕ್ ನೀಡಿದ್ದಾರೆ.

ದೆಹಲಿ ಶಾಸಕರುಗಳಾದ ನೀರಜ್ ಬಸೋಯ ಹಾಗೂ ನಸೀಬ್ ಸಿಂಗ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಭ್ರಷ್ಟಾಚಾರದಲ್ಲಿ ಮುಳುಗಿರುವ ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಈ ತೀರ್ಮಾನ ಕೈಗೊಂಡಿದ್ದೇವೆ ಎಂದಿದ್ದಾರೆ. ಈ ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular