HomeKarnatakaಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬೆಂಗಳೂರು : ರಾಜ್ಯದಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಬಹುತೇಕ ಕಡೆ ಕೆಜಿಗೆ 70-90 ರೂ.ಗೆ ಮಾರಾಟವಾಗುತ್ತಿದ್ದು, ಜನಸಾಮಾನ್ಯರಿಗೆ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಏರಿಕೆಯ ಶಾಕ್ ಎದುರಾಗಿದೆ.

ಕಳೆದ ವಾರವಷ್ಟೇ ಕೆಜಿಗೆ 30-35 ರೂ. ಇದ್ದ ಈರುಳ್ಳಿ ಬೆಲೆ ಕೆಜಿಗೆ 70-90 ರೂ.ವರೆಗೆ ಮಾರಾಟವಾಗುತ್ತಿದೆ. ಬೆಂಗಳೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 100 ರೂ. ವರೆಗೆ ಏರಿಕೆಯಾಗಿದ್ದರೆ, ಕೆಲ ಜಿಲ್ಲೆಗಳಲ್ಲಿ ಸಣ್ಣ ಗಾತ್ರದ ಈರುಳ್ಳಿ ಕೆಜಿಗೆ 70 ರೂ.ಗೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಬಳ್ಳಾಪುರ, ಕಾರವಾರ ಸೇರಿದಂತೆ ಹಲವಡೆ ಕೆಜಿಗೆ 90-95 ರೂ.ಗೆ ಮಾರಾಟವಾದರೆ ರಾಮನಗರದಲ್ಲಿ ಕೆಜಿಗೆ 100 ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ಬರದ ನಡುವೆಯೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular