HomeEntertainmentನಾಳೆ ಬಿಡುಗಡೆಯಾಗುತ್ತಿದೆ 'ಫಾರ್ ರಿಜಿಸ್ಟ್ರೇಷನ್' ಚಿತ್ರದ ಮತ್ತೊಂದು ಗೀತೆ

ನಾಳೆ ಬಿಡುಗಡೆಯಾಗುತ್ತಿದೆ ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ಮತ್ತೊಂದು ಗೀತೆ

ನವೀನ್ ದ್ವಾರಕನಾಥ್ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ‘ಒಂದೇ ಒಂದು ಸಾರಿ’ ಎಂಬ ಲಿರಿಕಲ್ ಸಾಂಗ್ ನಾಳೆ ಜನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ನಟಿ ಮಿಲನ ನಾಗರಾಜ್ ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ರವಿಶಂಕರ್, ಸುಧಾ ಬೆಳವಾಡಿ, ತಬಲ ನಾಣಿ, ಬಾಬು ಈರಣ್ಣಯ್ಯ, ಸ್ವಾತಿ, ರಮೇಶ್ ಭಟ್, ಸಿಹಿ ಕಹಿ ಚಂದ್ರು, ಅರವಿಂದ್, ಬ್ಯಾಂಕ್ ಜನಾರ್ದನ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ನಿಶ್ಚಲ್ ಫಿಲಂಸ್ ಬ್ಯಾನರ್ ನಡಿ ನವೀನ್ ರಾವ್ ನಿರ್ಮಾಣ ಮಾಡಿದ್ದಾರೆ. ಮನು ಸಂಕಲನ, ಅಭಿಲಾಶ್ ಕಲ್ಲತ್ತಿ ಹಾಗೂ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಆರ್ ಕೆ ಹರೀಶ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular