ಸ್ಯಾಂಡಲ್ವುಡ್ನ ಪ್ರತಿಭಾವಂತ ನಟ ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಆಗಸ್ಟ್ 9ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭೀಮ ಚಿತ್ರತಂಡ ‘ಡು ನಾಟ್ ವರಿ ಬೇಬಿ ಚಿನ್ನಮ್ಮ’ ಎಂಬ ಹಾಡೊಂದನ್ನ ಇದೇ ಜೂನ್ 30ಕ್ಕೆ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ನಿರ್ಮಾಣ ಮಾಡಿದ್ದು, ದುನಿಯಾ ವಿಜಯ್ ಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ. ಕಲ್ಯಾಣಿ ರಾಜು, ಪ್ರಿಯಾ ಶತಮರ್ಶನ್, ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಂಗಾಯಣ ರಘು, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು, ಶಿವಸೇನಾ ಛಾಯಾಗ್ರಹಣ ಹಾಗೂ ಧನಂಜಯ್ ನೃತ್ಯ ನಿರ್ದೇಶನವಿದೆ.