HomeEntertainmentನಾಳೆ 'ಕೆಟಿಎಂ' ಚಿತ್ರದ ಮತ್ತೊಂದು ಸಾಂಗ್ ರಿಲೀಸ್

ನಾಳೆ ‘ಕೆಟಿಎಂ’ ಚಿತ್ರದ ಮತ್ತೊಂದು ಸಾಂಗ್ ರಿಲೀಸ್

ಅರುಣ ನಿರ್ದೇಶನದ ದೀಕ್ಷಿತ್ ಶೆಟ್ಟಿ ನಟನೆಯ ಕೆಟಿಎಂ ಚಿತ್ರದ ಮೊದಲ ಹಾಡು ಇತ್ತೀಚಿಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೊಂದು ಲಿರಿಕಲ್ ಸಾಂಗ್ ನಾಳೆ ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ.’ಅಯ್ಯಯ್ಯೋ’ ಎಂಬ ಹಾಡು ಇದಾಗಿದ್ದು, a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ

ಮಹಾಸಿಂಹ ಮೂವೀಸ್ ಲಾಂಛನದಲ್ಲಿ ವಿನಯ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ, ಸಂಜನಾ ದಾಸ್, ಕಾಜಲ್ ಕುಂದರ್ ಪ್ರಮುಖ ಪಾತ್ರದಲ್ಲಿದ್ದು, ರಘು ರಮಣಕೊಪ್ಪ, ಶಾನಿಲ್ ಗುರು, ಉಷಾ ಭಂಡಾರಿ, ಪ್ರಕಾಶ್ ತುಮ್ಮಿನಾಡು, ಬಾಬು ಹಿರಣಯ್ಯ,  ಅಭಿಷೇಕ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ಚೇತನ್ ರಾವ್ ಸಂಗೀತ ಸಂಯೋಜನೆ ನೀಡಿದ್ದು, ಅರ್ಜುನ್ ಕಿಟ್ಟು ಸಂಕಲನ, ನವೀನ್ ಕುಮಾರ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular