ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ಬಹುನಿರೀಕ್ಷಿತ ಸಂಜು ಚಿತ್ರ ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದ್ದು ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ‘ನನ ಸುಟ್ಟು ಹೋದವಳೇ’ ಎಂಬ ಫೀಲಿಂಗ್ ಸಾಂಗ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಧಾರಿತ ಈ ಚಿತ್ರದಲ್ಲಿ ಮನ್ವಿತ್ ಅವರಿಗೆ ಜೋಡಿಯಾಗಿ ರೇಖಾದಾಸ್ ಪುತ್ರಿ ಶ್ರಾವ್ಯ ಅಭಿನಯಿಸಿದ್ದು, ದಿಶಾ ಎಂಟರ್ಪ್ರೈಸಸ್ ಲಾಂಛನದಲ್ಲಿ ಸಂತೋಷ್ ಡಿಂಕಾ ಮಹದೇವಪ್ಪ ನಿರ್ಮಾಣ ಮಾಡಿದ್ದಾರೆ. ವಿಜಯ್ ಹರಿತ್ಸ ಸಂಗೀತ ಸಂಯೋಜನೆ ನೀಡಿದ್ದು, ಸಂಜೀವ ರೆಡ್ಡಿ ಸಂಕಲನ, ವಿದ್ಯಾ ನಾಗೇಶ್ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮದನ್ ಮತ್ತು ಹರಿಣಿ ಅವರ ನೃತ್ಯ ನಿರ್ದೇಶನವಿದೆ.