HomeKarnatakaSHOCKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೋರ್ವ ಬಾಲಕ ಬಲಿ

SHOCKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೋರ್ವ ಬಾಲಕ ಬಲಿ

ಉಡುಪಿ : ಆಘಾತಕಾರಿ ಸುದ್ದಿ ಎಂಬಂತೆ ರಾಜ್ಯದಲ್ಲಿ ಮತ್ತೋರ್ವ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿ ಓದುತ್ತಿದ್ದ ಈತನಿಗೆ ಹುಟ್ಟಿನಿಂದಲೂ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ. ಡಿ.6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದನು. ನಂತರ ಮತ್ತೆ ಮನೆಗೆ ಹೋಗಿದ್ದ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

7ನೇ ತರಗತಿ ವಿದ್ಯಾರ್ಥಿನಿ ಸಾವು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ನಿನ್ನೆ ನಡೆದಿತ್ತು. 13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ವಿದ್ಯಾರ್ಥಿನಿ ಮೃತಪಟ್ಟಿದ್ದಳು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular