BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಕಾಲೇಜಿನ 4 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, ಕಾಲೇಜಿನ  4 ನೇ ಮಹಡಿಯಿಂದ ಜಿಗಿದು  ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೋಲದೇವಹನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ . ಮೃತರನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ.

ಕಾಲೇಜಿನ 4 ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾಳೆ. ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ.

ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಈಕೆ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ  ಎಂದು   ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read