ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುರಳಿ ಎಂಬ ವ್ಯಕ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
