ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಡಾ. ಕೆ.ಜಿ. ಜಗದೀಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಇದುವರೆಗೆ ಇದ್ದ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
ಹೆಚ್. ಬಸವರಾಜೇಂದ್ರ ಅವರನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರಿದ್ದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಜಿ.ಟಿ. ನಿಟ್ಟಾಲಿ ಅವರಿಗೆ ಶಿಕ್ಷಣ ಇಲಾಖೆ ಬಿಸಿಯೂಟ ನಿರ್ದೇಶಕರ ಹುದ್ದೆಯನ್ನು ಹೆಚ್ಚುವರಿಯಾಗಿ ಮುಂದುವರಿಸಲಾಗಿದೆ.