HomeLatest Newsಆಡಳಿತಕ್ಕೆ ಮತ್ತೆ ಸರ್ಜರಿ: ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ, ಇಬ್ಬರಿಗೆ ಹೆಚ್ಚುವರಿ ಹೊಣೆ

ಆಡಳಿತಕ್ಕೆ ಮತ್ತೆ ಸರ್ಜರಿ: ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ, ಇಬ್ಬರಿಗೆ ಹೆಚ್ಚುವರಿ ಹೊಣೆ

ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಹಿರಿಯ ಏಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಮೂವರು ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಲಾಗಿದೆ.

ಕೈಗಾರಿಕಾ ಇಲಾಖೆ ಕಾರ್ಯದರ್ಶಿ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಆರ್. ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಡಾ.ಬಿ.ಸಿ. ಸತೀಶ್ ಅವರನ್ನು ಕೈಗಾರಿಕಾ ಇಲಾಖೆ ನಿರ್ದೇಶಕರಾಗಿ, ಎಂ.ಎಸ್. ದಿವಾಕರ್ ಅವರನ್ನು ಕೆ.ಎಸ್.ಎನ್.ಡಿ.ಎಂ.ಸಿ. ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂ.ಎಸ್. ದಿವಾಕರ್ ಅವರಿಗೆ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಿ. ರಂದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular