BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಬಾಗಲಕೋಟೆ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನ ಮಲ್ಲಿಕಾರ್ಜುನ , ರೇವಣ್ಣ ಸಿದ್ದಪ್ಪ , ಸುರೇಶ್ ಕೊಣ್ಣೂರ ಎಂದು ಗುರುತಿಸಲಾಗಿದೆ. ವೇಗವಾಗಿ ಬರುತ್ತಿದ್ದ ಲಾರಿ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಡಿಕ್ಕಿ ರಭಸಕ್ಕೆ ಲಾರಿ-ಟ್ಯಾಂಕರ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read