BREAKING : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಶವ ಪತ್ತೆ, ತನಿಖೆಗೆ ಆದೇಶ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿಯ ಶವ ಪತ್ತೆಯಾಗಿದೆ.

ಜಿಲ್ಲೆಯ ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ಅರ್ಧದೇಹ ಪತ್ತೆಯಾಗಿದ್ದು, ಮಣ್ಣಿನಲ್ಲಿ ಹುದುಗಿಡಿಸಲಾಗಿದೆ.

ಹನೂರು ವಲಯದ ಹಚ್ಚಿದೊಡ್ಡಿ ಗ್ರಾಮದ ಸಮೀಪ ಗುರುವಾರ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತು ತಿರು ಗುತ್ತಿದ್ದರು. ಈ ವೇಳೆ, ಸತ್ತ ಹುಲಿಯ ಅರ್ಧ ದೇಹ ಪತ್ತೆಯಾಗಿದೆ. ಹುಲಿಯ ತಲೆ, ಭುಜ,ಮುಂಗಾಲುಗಳು ಪತ್ತೆಯಾಗಿದ್ದು ಉಳಿದ ಭಾಗಗಳು ಸಿಕ್ಕಿಲ್ಲ, ಇನ್ನುಳಿದ ಭಾಗ ವನ್ನು ಪತ್ತೆ ಹಚ್ಚಲು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಳೆದ ಜೂನ್ ನಲ್ಲಿ ಹನೂರು ತಾಲೂಕಿನ ಹೂಗ್ಯಂ ವಲಯ ಆರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ವಿಷ ಬೆರೆಸಿದ ಮಾಂಸ ತಿಂದು ಸಾವನಪ್ಪಿದ್ದವು.

ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಹುಲಿ ಹತ್ಯೆ ನಡೆದಿರುವ ಘಟನೆ ಅತ್ಯಂತ ದುಃಖಕರ ಮತ್ತು ಖಂಡನೀಯ. ಈ ಘಟನೆಗೆ ಸಂಬಂಧಿಸಿದಂತೆ ನಾನು ಪಿಸಿಸಿಎಫ್ (ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ) ಶ್ರೀಮತಿ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಮತ್ತು ತುರ್ತು ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ. ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.  

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read