HomeEntertainmentಜುಲೈ 10 ಕ್ಕೆ ಬಿಡುಗಡೆಯಾಗಲಿದೆ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದ ಮತ್ತೊಂದು ಟ್ರೈಲರ್

ಜುಲೈ 10 ಕ್ಕೆ ಬಿಡುಗಡೆಯಾಗಲಿದೆ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಮತ್ತೊಂದು ಟ್ರೈಲರ್

ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೇ youtube ನಲ್ಲಿ ಬಿಡುಗಡೆಯಾಗಿ ಭರ್ಜರಿ ಸೌಂಡ್ ಮಾಡಿದ್ದು, ಇದರ ಮತ್ತೊಂದು ಟ್ರೈಲರ್ ಜುಲೈ 10 ಕ್ಕೆ ಬರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಜುಲೈ 19ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ  ಬರಲಿದ್ದು,  ಜುಲೈ 14ಕ್ಕೆ ದುಬೈನಲ್ಲಿ ಪ್ರೀಮಿಯರ್ ಶೋ ನಡೆಯಲಿದೆ.

ಈ ಚಿತ್ರದಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ,ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್‌ ಹಾಗೂ ಅರವಿಂದ ರಾವ್, ಬಣ್ಣ ಹಚ್ಚಿದ್ದು, ವೆರೈಟಿ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ಸುಬ್ರಹ್ಮಣ್ಯ ಕುಕ್ಕೆ ಹಾಗೂ ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ. ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಪವನ್ ಗೌಡ ಸಂಕಲನ,  ಟೈಗರ್ ಶಿವು ಹಾಗೂ ನರಸಿಂಹ ಅವರ  ಸಾಹಸ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular