BIG BREAKING : ‘ಮುಡಾ’ ಹಗರಣದಲ್ಲಿ ‘CM’ ಗೆ ಮತ್ತೊಂದು ಬಿಗ್ ಶಾಕ್ : ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಪ್ರಕರಣದ ತನಿಖೆ ನಡೆದಿದೆ.  ‘ಮುಡಾ’ ಹಗರಣದಲ್ಲಿ ‘CM’ ಗೆ ಮತ್ತೊಂದು ಬಿಗ್ ಶಾಕ್  ಎದುರಾಗಿದ್ದು,  ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ. 6 ವಾರಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ ಪಿಗೆ ಕೋರ್ಟ್ ಆದೇಶ ಹೊರಡಿಸಿದೆ.

ವಾದ ವಿವಾದ ಆಲಿಸಿದ ಕೋರ್ಟ್  ಈ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಈ ಆದೇಶ ಹೊರಡಿಸಿದ್ದಾರೆ. ಸಿದ್ದರಾಮಯ್ಯ ಡಿಸಿಎಂ ಆಗಿದ್ದಾಗ ನಡೆದ ಘಟನೆಗಳ ಬಗ್ಗೆ ಕೂಡ ಜಡ್ಜ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ತನಿಖೆಗೆ ಹಿಂಜರಿಯಬಾರದು ಎಂಬ ಹೈಕೋರ್ಟ್ ತೀರ್ಪನ್ನು ಜಡ್ಜ್ ಉಲ್ಲೇಖಿಸಿದ್ದಾರೆ.

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಾಹಂ ಜನಪ್ರತಿನಿಧಿಗಳ ಕೊರ್ಟ್ ನಲ್ಲಿಯೂ ಖಾಸಗಿ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಪ್ರಕಟಿಸಿರುವ ತೀರ್ಪಿನ ಪ್ರತಿ ಹಿಡಿದು ದೂರುದಾರರು ಜನಪ್ರತಿನಿಧಿಗಳ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read