HomeKarnatakaVande Bharat Express : ಶೀಘ್ರದಲ್ಲೇ ರಾಜ್ಯಕ್ಕೆ ಮತ್ತೊಂದು 'ವಂದೇ ಭಾರತ್' ರೈಲು : ಬೆಂಗಳೂರು-ಹೈದರಾಬಾದ್...

Vande Bharat Express : ಶೀಘ್ರದಲ್ಲೇ ರಾಜ್ಯಕ್ಕೆ ಮತ್ತೊಂದು ‘ವಂದೇ ಭಾರತ್’ ರೈಲು : ಬೆಂಗಳೂರು-ಹೈದರಾಬಾದ್ ನಡುವೆ ಸಂಚಾರ

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ನಡೆಸಲಿದೆ.

ಹೈದರಾಬಾದ್ ಹಾಗೂ ಬೆಂಗಳೂರು ನಡುವೆ ಸಂಚರಿಸಲಿರುವ ಹೊಸ ರೈಲು ಆಗಸ್ಟ್ ಅಂತ್ಯಕ್ಕೆ ಸಂಚಾರ ಆರಂಭಿಸಲಿದೆ.

ಈಗಾಗಲೇ ಕಾಚಿಗುಡ-ಧೋನ್ವರೆಗೆ ಪ್ರಾಯೋಗಿಕ ಸಂಚಾರ ಪೂರ್ಣಗೊಂಡಿದ್ದು ಯಶವಂತಪುರ-ಹೈದರಾಬಾದ್ ನಡುವೆ ಹೊಸ ರೈಲು ಸಂಚರಿಸಲಿದೆ. ಶೀಘ್ರದಲ್ಲೇ ಯಶವಂತಪುರವರೆಗೆ ಪ್ರಾಯೋಗಿಕ ಸಂಚಾರ ಪೂರ್ಣಗೊಳ್ಳಲಿದೆ. ಆಗಸ್ಟ್ ಅಂತ್ಯದೊಳಗೆ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ. ಹೊಸ ರೈಲು ಬೆಳಗ್ಗೆ ಕಾಚಿಗುಡದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ತಲುಪಲಿದೆ. ಬಳಿಕ 2 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ ವೇಳೆಗೆ ಕಾಚಿಗುಡ ಬರಲಿದೆ/

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular