ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಮೈ ಮೇಲೆ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವೃದ್ದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಪದ್ಮಲತ (73) ಎಂಬುವವರ ಮೇಲೆ ಬಿಎಂಟಿಸಿ ಬಸ್ ಹರಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವೃದ್ದೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಮೃತಪಟ್ಟಿದ್ದಾರೆ. ಈ ಸಂಬಂಧ ಚಾಲಕನ ವಿರುದ್ಧ ಕೆಂಗೇರಿ ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:bmtc bus accident