
ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಪದ್ಮಲತ (73) ಎಂಬುವವರ ಮೇಲೆ ಬಿಎಂಟಿಸಿ ಬಸ್ ಹರಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವೃದ್ದೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಮೃತಪಟ್ಟಿದ್ದಾರೆ. ಈ ಸಂಬಂಧ ಚಾಲಕನ ವಿರುದ್ಧ ಕೆಂಗೇರಿ ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

