ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ರಸ್ತೆ ದಾಟುವಾಗ ಪಾದಚಾರಿಗೆ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಪಾದಚಾರಿಯನ್ನು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಟಿನ್ ಫ್ಯಾಕ್ಟರಿಯಿಂದ ಚಿನ್ನಸಂದ್ರ ಕಡೆಗೆ ಬಸ್ ಹೋಗುತ್ತಿತ್ತು.ಸದ್ಯ ಬಸ್ ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.