HomeKarnatakaBREAKING : ಬೆಂಗಳೂರಲ್ಲಿ ಕಿಲ್ಲರ್ BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ...

BREAKING : ಬೆಂಗಳೂರಲ್ಲಿ ಕಿಲ್ಲರ್ BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು.!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್‌ಗಳ ಅಬ್ಬರಕ್ಕೆ ಸರಣಿ ಸಾವುಗಳು ಮುಂದುವರಿದಿದ್ದು, ನೆಲಮಂಗಲದ ಬಳಿ ನಡೆದ ಭೀಕರ ಅಪಘಾತದಲ್ಲಿ ಯಾದಗಿರಿ ಮೂಲದ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಯಾದಗಿರಿ ಮೂಲದ ಲಕ್ಷ್ಮೀ (30) ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಇಂದು ಮಗನಿಗೆ ಆರೋಗ್ಯ ಸರಿ ಇಲ್ಲದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗನನ್ನು ಆಸ್ಪತ್ರೆಯಲ್ಲಿ ತೋರಿಸಿ ವಾಪಸ್ ಬರುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ.

ಅಪಘಾತ ನಡೆದಿದ್ದು ಹೇಗೆ? ನೆಲಮಂಗಲದ ಗೊಲ್ಲರಹಟ್ಟಿ ಕ್ರಾಸ್ ಬಳಿ ಲಕ್ಷ್ಮೀ ಅವರು ಮಗನೊಂದಿಗೆ ಹೋಗುತ್ತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಕ್ಷ್ಮೀ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಪೊಲೀಸರ ಭೇಟಿ: ಘಟನೆ ನಡೆದ ತಕ್ಷಣ ಮಹದೇವಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಪೊಲೀಸರು ಬಸ್ ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular