ಬೆಂಗಳೂರು: ಇತ್ತೀಚಿಗೆ ಆರು ನಕ್ಸಲರು ಶರಣಾಗುವುದರೊಂದಿಗೆ ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ. ಹೀಗಾಗಿ ನಕ್ಸಲ್ ಪಡೆ ನಿಗ್ರಹ ಪಡೆ ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು 10 ಕೋಟಿ ರೂಪಾಯಿ ವೆಚ್ಚದ ವಿಶೇಷ ಪ್ಯಾಕೇಜ್ ರೂಪಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.