HomeKarnatakaBIG NEWS: ಕರ್ನಾಟಕ ನಕ್ಸಲ್ ಮುಕ್ತವಾದ ಹಿನ್ನಲೆ ರಾಜ್ಯದಲ್ಲಿ 'ನಕ್ಸಲ್ ನಿಗ್ರಹ ಪಡೆ' ವಿಸರ್ಜನೆ: ಸಿಎಂ...

BIG NEWS: ಕರ್ನಾಟಕ ನಕ್ಸಲ್ ಮುಕ್ತವಾದ ಹಿನ್ನಲೆ ರಾಜ್ಯದಲ್ಲಿ ‘ನಕ್ಸಲ್ ನಿಗ್ರಹ ಪಡೆ’ ವಿಸರ್ಜನೆ: ಸಿಎಂ ಘೋಷಣೆ

ಬೆಂಗಳೂರು: ಇತ್ತೀಚಿಗೆ ಆರು ನಕ್ಸಲರು ಶರಣಾಗುವುದರೊಂದಿಗೆ ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ. ಹೀಗಾಗಿ ನಕ್ಸಲ್ ಪಡೆ ನಿಗ್ರಹ ಪಡೆ ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು 10 ಕೋಟಿ ರೂಪಾಯಿ ವೆಚ್ಚದ ವಿಶೇಷ ಪ್ಯಾಕೇಜ್ ರೂಪಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular