ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆ ಬರುತ್ತಿದ್ದು, ಈ ಬಗ್ಗೆ ದೂರು ನೀಡಿದ್ದಾರೆ.
ತಮಗೆ ಬೆದರಿಕೆ ಕರೆ ಬರುತ್ತಿರುವುದಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಅನ್ವರ್ ಮಾಣಿಪ್ಪಾಡಿ ಪ್ರಸ್ತುತ ಮಂಗಳೂರಿನ ತಮ್ಮ ನಿವಾಸದಲ್ಲಿ ವಾಸವಾಗಿದ್ದು, ವಿದೇಶದಿಂದ ಅವರಿಗೆ ಬೆದರಿಕೆ ಕರೆ ಬರುತ್ತಿದೆ ಎನ್ನಲಾಗಿದೆ.