HomeKarnatakaವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ...

ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ಹೆಸರನ್ನ ಮೊದಲೇ ಬಾರಿಗೆ ಪ್ರಸ್ತಾಪಿಸಿದೆ ಅನ್ವರ್ ಮಣಿಪ್ಪಾಡಿಯವರು. ವಕ್ಫ್ ವರದಿಯನ್ನು ಮುಚ್ಚಿಹಾಕಲು ವಿಜಯೇಂದ್ರ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ಪ್ರತಿ ಮಾಧ್ಯಮಗಳಲ್ಲೂ ಘಂಟಾಘೋಷವಾಗಿ ಹೇಳಿದ್ದ ಮಾಣಿಪ್ಪಾಡಿಯವರು ಈಗ ವಿಜಯೇಂದ್ರರ ರಕ್ಷಣೆಗಾಗಿ ಮಾತು ಬದಲಿಸಲು ಎಷ್ಟು ‘ಆಫರ್’ ಬಂದಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರನ್ನು ಬಹಿರಂಗಪಡಿಸುವ ಬದಲು ಅವರು ವಿಜಯೇಂದ್ರ ಅವರ ಹೆಸರನ್ನು ಮಾತ್ರ ಏಕೆ ಹೇಳಿದರು? ಮಾಣಿಪ್ಪಾಡಿಯವರ ವಕ್ಫ್ ವರದಿಯನ್ನು ಮುಚ್ಚಿಹಾಕುವ ಪ್ರಯತ್ನದ ಕುರಿತು ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದರು. ಆ ಪತ್ರವನ್ನು ಈಗ ಬಹಿರಂಗಪಡಿಸಲಿ. ಮಾಣಿಪ್ಪಾಡಿಯವರ ಮತ್ತು ಬಿಜೆಪಿ ಗೆಳೆಯರ ನೆನಪುಗಳನ್ನು ರಿಫ್ರೆಶ್ ಮಾಡಲು ದಯವಿಟ್ಟು ವೀಡಿಯೊಗಳು ಮತ್ತು ಪತ್ರಿಕಾ ಲೇಖನಗಳನ್ನು ಅತ್ಯಂತ ಗಮನ ಕೊಟ್ಟು ನೋಡಲಿ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ, ಅವರ ಮಾಜಿ ಮುಖ್ಯಮಂತ್ರಿಗಳ ಹಾಗೂ ಅವರ ಅಧ್ಯಕ್ಷರ ಮರ್ಯಾದೆ ಉಳಿಸಲು ನಿನ್ನೆ ಇಡೀ ರಾತ್ರಿ ಮಾಣಿಪ್ಪಾಡಿಯವರ ಕೈ ಕಾಲು ಹಿಡಿದು ಗೋಳಾಡಿರಬಹುದೇ? ಸತ್ಯಕ್ಕಾಗಿ ಹಾಗೂ ಸಮುದಾಯಕ್ಕಾಗಿ ಹುತಾತ್ಮರಾಗಲು ಸಿದ್ಧನಿದ್ದೇನೆ ಎಂದಿದ್ದ ಮಣಿಪ್ಪಾಡಿಯವರಿಗೆ ಈಗ ಏನಾಯಿತು ಎಂದು ಖರ್ಗೆ ಪ್ರಶ್ನಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular