BREAKING NEWS: ತಾಂತ್ರಿಕ ದೋಷದಿಂದ ಆಂಧ್ರ ಸಿಎಂ ಜಗನ್ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ವಿಜಯವಾಡ: ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸ್ವಲ್ಪ ಸಮಯದ ಹಿಂದೆ ಸಿಎಂ ಜಗನ್ ಗನ್ನವರಂನಿಂದ ದೆಹಲಿಗೆ ತೆರಳಿದ್ದರು. ಆದರೆ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ವಿಮಾನವು ತಕ್ಷಣವೇ ಗನ್ನವರಂ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ತುರ್ತು ಭೂಸ್ಪರ್ಶ ಮಾಡಿದೆ.

ನಾಳೆ ದೆಹಲಿಯಲ್ಲಿ ನಡೆಯಲಿರುವ ಎಪಿ ಗ್ಲೋಬಲ್ ಇನ್ವೆಸ್ಟರ್ಸ್ ಶೃಂಗಸಭೆಯ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಜಗನ್ ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಗನ್ನವರಂ ವಿಮಾನ ನಿಲ್ದಾಣದಿಂದ ಹೊರಟರು. ಈ ವಿಮಾನದಲ್ಲಿ ಸಿಎಂ ಜಗನ್ ಜೊತೆಗೆ ಜವಾಹರ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ತೆರಳಿದ್ದರು. ಆದರೆ, ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಪೈಲಟ್‌ಗಳು ತಕ್ಷಣ ವಿಮಾನವನ್ನು ಗನ್ನವರಂ ವಿಮಾನ ನಿಲ್ದಾಣಕ್ಕೆ ತಿರುಗಿಸಿದರು. ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read