HomeKarnatakaಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಮತ್ತು ನಟಿ ಅಪರ್ಣಾ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಸಂಜೆ ಅನಾರೋಗ್ಯದಿಂದ ಅಪರ್ಣಾ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 51 ವರ್ಷ ವಯಸ್ಸಾಗಿತ್ತು. 1984ರಲ್ಲಿ ತೆರೆಕಂಡ ‘ಮಸಣದ ಹೂವು’, ‘ಇನ್ಸ್ಪೆಕ್ಟರ್ ವಿಕ್ರಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. ನಮ್ಮ ಮೆಟ್ರೋಗೆ ಅವರು ಧ್ವನಿ ನೀಡಿದ್ದರು. ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದರು. ಅಲ್ಲದೆ ವಿವಿಧ ಭಾರತಿಯಲ್ಲಿ ಆರ್.ಜೆ. ಆಗಿ ಕಾರ್ಯನಿರ್ವಹಿಸಿದ್ದರು.

ದೀಪಾವಳಿ ಕಾರ್ಯಕ್ರಮದಲ್ಲಿ ಸತತ ಎಂಟು ಗಂಟೆಗಳ ಕಾಲ ನಿರೂಪಣೆ ಮಾಡಿದ್ದರು. ಅನೇಕ ಕಾರ್ಯಕ್ರಮಗಳನ್ನು ಕೂಡ ನಿರೂಪಿಸಿದ್ದರು. ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಮನೆಗೆ ಮರಳಿದ್ದ ಅವರು ಬನಶಂಕರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಕಂಬನಿ ನಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular