HomeLatest NewsBREAKING: ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಬಾಲ್ಕನಿಯಿಂದ ಹಾರಿದ್ದ ತಂದೆ, ಇಬ್ಬರು...

BREAKING: ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಬಾಲ್ಕನಿಯಿಂದ ಹಾರಿದ್ದ ತಂದೆ, ಇಬ್ಬರು ಮಕ್ಕಳು ಸಾವು

ನವದೆಹಲಿ: ದೆಹಲಿಯ ಶಾಬಾದ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಜೀವ ಉಳಿಸಿಕೊಳ್ಳಲು ಮನೆಯ ಬಾಲ್ಕನಿಂದ ಕೆಳಗೆ ಹಾರಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಾರ್ಟ್ ಮೆಂಟ್ ನ 7ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ನಿವಾಸಿಗಳು ಪ್ರಾಣ ರಕ್ಷಣೆಗಾಗಿ ಪರದಾಡಿದ್ದಾರೆ. ಬೇರೆ ದಾರಿಯಿಲ್ಲದೇ ಜೀವ ಉಳಿಸಿಕೊಳ್ಳಲೆಂದು ಮನೆಯ ಬಾಲ್ಕನಿಯಿಂದ ಮೂವರು ಹಾರಿದ್ದರು. ಇದೀಗ ಮೂವರು ಮೃತಪಟ್ತಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟ್ಟಡದಿಂದ ಕೆಳಗೆ ಜಿಗಿದವರು ತಂದೆ ಹಾಗೂ ಇಬ್ಬರು ಮಕ್ಕಳು ಎಂದು ತಿಳಿದುಬಂದಿದೆ. ಮೂವರು ಸಾವನ್ನಪ್ಪಿದ್ದಾರೆ. ಅಪಾರ್ಟ್ ಮೆಂಟ್ ನ 7 ನೇ ಮಹಡಿಯಲ್ಲಿ ಇಂದು ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ೮ ಅಗ್ನಿಶಾಮಕ ದಳ ದೌಡಾಯಿಸಿ ಸದ್ಯ ಬೆಂಕಿ ತಹಬದಿಗೆ ತಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular