ಬೆಂಗಳೂರು: ಬೆಂಗಳೂರಿನಲ್ಲಿ ಮನೆಯ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಅಪಾರ್ಟ್ಮೆಂಟ್ ನಿಂದ ಬಿದ್ದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಪಿ.ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. 72 ವರ್ಷದ ಪರಮೇಶ್ವರ್ ಮೃತ ದುರ್ದೈವಿ. ಅಪಾರ್ಟ್ಮೆಂಟ್ ನ 18ನೇ ಫ್ಲೋರ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪಿದ್ದಾರೆ. ಇದು ಆಕಸ್ಮಿಕ ಘಟನೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನು ನಿಖರವಾಗಿ ತಿಳಿದುಬಂದಿಲ್ಲ.
ಪರಮೇಶ್ವರ್ ಅವರು ತನ್ನ ತಂಗಿಯ ಮನೆಗೆಂದು ಬಂದಿದರು. ಈ ವೇಳೆ ದುರಂತಕ್ಕೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

