HomeKarnatakaBREAKING NEWS: ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

BREAKING NEWS: ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನ 4ನೇ ಮಹದಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾನೆ. ಅಬಿದುಲ್ಲಾ ಮೃತ ಕಾರ್ಮಿಕ. ಬಿಹಾರ ಮೂಲದ ಅಬಿದುಲ್ಲಾ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಅಪಾರ್ಟ್ ಮೆಂಟ್ ನ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ.

ಮೃತ ಅಬಿದುಲ್ಲಾ ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಕುಟುಂಬದವರು ಬಿಹಾರದಿಮ್ದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular