BIG NEWS : ಇನ್ಮುಂದೆ ಪೊಲೀಸರು ಆಸ್ತಿ, ಖರೀದಿ ಮಾರಾಟ ಮಾಡಲು ‘ಅನುಮತಿ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಇನ್ಮುಂದೆ ಪೊಲೀಸರು ಆಸ್ತಿ, ಖರೀದಿ ಮಾರಾಟ ಮಾಡಲು ‘ಅನುಮತಿ’ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಇಲಾಖೆಯ ನೌಕರರು ಮತ್ತು ಸಿಬ್ಬಂದಿಗಳು ಸ್ಥಿರ/ಚರಾಸ್ತಿಯನ್ನು ಖರೀದಿ/ಮಾರಾಟ ಮಾಡಲು ಅನುಮತಿ ಕೋರಿ ಸಲ್ಲಿಸಬೇಕಾದ ವಿವರ/ ದಾಖಲೆಗಳ ಬಗ್ಗೆ ವಿವರಿಸಲಾಗಿದೆ. ಸದರಿ ಸುತ್ತೋಲೆಯ ಪ್ರತಿಯನ್ನು ಠಾಣೆಯ/ಕಛೇರಿಯ ನಾಮಫಲಕದಲ್ಲಿ ಆಳವಡಿಸಿ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ‘ಎ’ ಮತ್ತು ‘ಬಿ’ ದರ್ಜೆ ಅಧಿಕಾರಿಗಳು (ಐ.ಪಿ.ಎಸ್ ಅಧಿಕಾರಿಗಳನ್ನು ಹೊರತುಪಡಿಸಿ) ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಖರೀದಿಸಲು / ಮಾರಾಟ ಮಾಡಲು / ಉಡುಗೊರೆ ಪಡೆಯಲು / ಗೃಹ ನಿರ್ಮಾಣ ಮಾಡಲು ಅನುಮತಿ ಕೋರಿ ಮನವಿಗಳನ್ನು ಪೊಲೀಸ್ ಪ್ರಧಾನ ಕಛೇರಿಗೆ ಸಲ್ಲಿಸುತ್ತಿದ್ದು, ಸದರಿಯವರುಗಳು ಸಲ್ಲಿಸುತ್ತಿರುವ ಮನವಿ / ಪ್ರಸ್ತಾವನೆಗಳನ್ನು ಪರಿಶೀಲಿಸಲಾಗಿ, ಸಲ್ಲಿಸುತ್ತಿರುವ ಮನವಿಗಳು ಅಪೂರ್ಣವಾಗಿದ್ದು, ಸಂಬಂಧಪಟ್ಟ ದಾಖಲೆಗಳನ್ನು ಮನವಿಯೊಂದಿಗೆ ಸಲ್ಲಿಸದಿರುವುದು ಕಂಡುಬಂದಿರುತ್ತದೆ. ಇದರಿಂದ ಅನಗತ್ಯ ವಿಳಂಬಕ್ಕೆ ಕಾರಣವಾಗಿರುತ್ತದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021, ದಿನಾಂಕ: 07/01/2021 ರ ನಿಯಮ 24 ರಂತೆ ಚರ, ಸ್ಥಿರ ಮತ್ತು ಬೆಲೆಬಾಳುವ ಸ್ವತ್ತು ಎಂಬುದರಡಿಯಲ್ಲಿ ಉಪ ನಿಯಮ (3) ರನ್ವಯ ಯಾರೇ ಸರ್ಕಾರಿ ನೌಕರನು ಅಥವಾ ಅವನ ಕುಟುಂಬದ ಯಾರೇ ಸದಸ್ಯನು ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಿದ ಹೊರತು, ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯನ ಹೆಸರಿನಲ್ಲಾಗಲೀ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ ಉಡುಗೊರೆಯ ಮೂಲಕ ಅಥವಾ ಅನ್ಯಥಾ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸತಕ್ಕದ್ದಲ್ಲ ಅಥವಾ ವಿಲೇ ಮಾಡತಕ್ಕದ್ದಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read